ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ #Christ King PU College ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಅಗ್ನಿಶಮನ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಕಳ ಅಗ್ನಿಶಾಮಕ ಠಾಣೆಯ ಅಧಿಕಾರಿ ಅಲ್ಬರ್ಟ್ ಮೋನಿಸ್ ಸಂಪನ್ಮೂಲ ವ್ಯಕ್ತಿಗಳಾಗಿದ್ದು ಅಗ್ನಿಶಮನ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ನಂತರ ಸಂಸ್ಥೆಯ ಹೊರಾವರಣದಲ್ಲಿ ಅಗ್ನಿಶಮನ ಪ್ರಾತ್ಯಕ್ಷಿಕೆ ನಡೆಯಿತು. ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವರ್ಗದವರು, ಸಂಸ್ಥೆಯ ಪ್ರಾಚಾರ್ಯರು ಉಪಸ್ಥಿತರಿದ್ದರು.
ನಂತರ ಸೇವಾ ಯೋಜನೆಯ ಸದಸ್ಯರು ಸ್ಥಳೀಯ ಪರಿಸರ ಸ್ವಚ್ಚತಾ ಕಾರ್ಯ ಕೈಗೊಂಡರು. ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ವಾಣಿಜ್ಯಶಾಸ್ತç ಉಪನ್ಯಾಸಕಿ ಸುಕನ್ಯಾ, ಉಪನ್ಯಾಸಕ ದೀಪಕ್ ಕಾರ್ಯಕ್ರಮ ಸಂಘಟಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post