ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಿರಂತರ ಒಂದಲ್ಲಾ ಒಂದು ಬಹುಪಯೋಗಿ ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸುತ್ತಾ ಬರುತ್ತಿದೆ. ಅತೀ ಕಡಿಮೆ ಶುಲ್ಕದೊಂದಿಗೆ ಅತ್ಯುತ್ತಮ ಶಿಕ್ಷಣ ನೀಡುವ ಈ ಸಂಸ್ಥೆ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿನ ಆಶಾಕಿರಣವಾಗಿ ಬೆಳೆದು ನಿಂತಿದೆ. ಈಗ ಮತ್ತೊಂದು ವಿದ್ಯಾರ್ಥಿ ಸ್ನೇಹಿ ಯೋಜನೆಗೆ ಚಾಲನೆ ನೀಡಿದ್ದು ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳಿಗೆ ಉಚಿತ ಲಾಂಗ್ ಟರ್ಮ್ ನೀಟ್ #NEET ತರಬೇತಿಯನ್ನು ಆರಂಭಿಸುತ್ತಿದೆ.
ಯಾವೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯಿಂದಾಗಿ ನೀಟ್ ತರಬೇತಿಯಿಂದ ವಂಚಿತಾರಾಗಬಾರದು ಎಂಬುದು ಇದರ ಉದ್ದೇಶವಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ (ಪಿಸಿಎಂಬಿ) ಮುಗಿಸಿ ವೈದ್ಯರಾಗಬೇಕೆಂದು ಕನಸು ಕಾಣುತ್ತಿರುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಅಪೂರ್ವ ಅವಕಾಶ ಸಿಗಲಿದೆ.
ನೀಟ್ ತರಬೇತಿಗೆ ಸೇರಬಯಸುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯ ಲಭ್ಯವಿದ್ದು, ಆಸಕ್ತರು ಈ ಕೂಡಲೇ ದೂರವಾಣಿ ಸಂಖ್ಯೆ 7022274843 ಅಥವಾ ಸಂಸ್ಥೆಯನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಸಂಸ್ಥೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post