ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿದ್ಯಾರ್ಥಿಗಳು ಜೀವನದಲ್ಲಿ ದೇಶಪ್ರೇಮ ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ಈ ಸಮಾಜದಲ್ಲಿ ಬಾಳಿ ಬದುಕಬೇಕು ಎಂದು ಕ್ರಿಯೇಟಿವ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರೂ ಆದ ವಿದ್ವಾನ್ ಗಣಪತಿ ಭಟ್ ಕರೆ ನೀಡಿದರು.
ಕಾರ್ಕಳದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 77 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶವು ಸ್ವಾತಂತ್ರ್ಯಗೊಂಡಡ ಬಳಿಕ ತನ್ನದೇ ಆದ ಆಡಳಿತ ವ್ಯವಸ್ಥೆಯನ್ನು ರೂಪಿಸಿಕೊಂಡದ್ದು ಸಂವಿಧಾನದ ರಚನೆಯಿಂದಾಗಿ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಒಂದು ಉತ್ತಮ ಸಂವಿಧಾನವನ್ನು ರಚಿಸಿಕೊಟ್ಟರು. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಭಾರತದ ಪ್ರಜೆಗಳಾದ ನಮ್ಮೆಲ್ಲರ ಆದ್ಯ ಕರ್ತವ್ಯ. ಜೀವನದಲ್ಲಿ ದೇಶಪ್ರೇಮವನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ಈ ಸಮಾಜದಲ್ಲಿ ಬಾಳಿ ಬದುಕಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ವಾಸ್ತುಶಿಲ್ಪಿಗಳಾದ ಪ್ರೊ. ವಸಂತ ಭಟ್ ದೇಶದ ಸ್ವಾತಂತ್ರ್ಯಕ್ಕಾಗಿ, ಭಾರತವನ್ನು ಗಣತಂತ್ರ ರಾಷ್ಟ್ರವನ್ನಾಗಿಸುವಲ್ಲಿ ತಮ್ಮನ್ನು ಅರ್ಪಿಸಿಕೊಂಡ ಹೋರಾಟಗಾರರ ಬಗ್ಗೆ ತಿಳಿಸುತ್ತಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಸಹಸಂಸ್ಥಾಪಕರಾದ ಎಸ್.ಎಲ್. ಅಶ್ವತ್, ಹಿರಿಯ ವಾಸ್ತುಶಿಲ್ಪಿಗಳಾದ ಸುನಿಲ್ ಕುಮಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲ ಭಾಷೆ ಉಪನ್ಯಾಸಕಿಯಾದ ಕುಮಾರಿ ಪವಿತ್ರ ನಡೆಸಿಕೊಟ್ಟರು. ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















