ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸ್ಕೌಟ್ಸ್ ಗೈಡ್ಸ್ ಮತ್ತು ಕಬ್ – ಬುಲ್‌ಬುಲ್ ವಿದ್ಯಾರ್ಥಿಗಳಿಗೆ 2 ದಿನಗಳ ಕಾಲ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ.
ಸ್ಕೌಟ್ಸ್ ಗೈಡ್ಸ್ ಶಿಕ್ಷಕರಾದ ಉಮೇಶ್ ಕಾಂಚನ್, ಡಾನ್ ಬಾಸ್ಕೋ ಶಾಲೆ ಶಿರ್ವ ಇವರು ಧ್ವಜಾರೋಹಣವನ್ನು ಮಾಡುವ ಮೂಲಕ ಸಾಂಕೇತಿಕವಾಗಿ ಶಿಬಿರಕ್ಕೆ ಚಾಲನೆ ನೀಡಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿಯಾದ ಆನಂದ್ ಬಿ. ಅಡಿಗರವರು ಮಾತನಾಡಿ, ಜಾತಿ, ಧರ್ಮ, ಮತ ಬೇಧವಿಲ್ಲದೆ ನಾವೆಲ್ಲರೂ ಒಂದೇ ಎಂಬುದನ್ನು ಸ್ಕೌಟ್ಸ್ ಮತ್ತು ಗೈಡ್ಸ್ ತಿಳಿಸುತ್ತದೆ ಎಂದು ಹೇಳಿ ಶಿಬಿರಕ್ಕೆ ಶುಭ ಹಾರೈಸಿದರು.
Also read: ನಾಳೆ ಬೆಳಗ್ಗೆ 10 ಗಂಟೆಗೆ ಮಂಡ್ಯದ ಕಾಳಿಕಾಂಬಾ ದೇವಾಲಯದಲ್ಲಿ ಸುಮಲತಾ ನಿರ್ಧಾರ ಪ್ರಕಟ
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿಕ್ಷಣ ಶಿಕ್ಷಣ ಸಂಯೋಜಕರಾದ ಕಾರ್ಕಳ ಮಾತನಾಡಿ, ಸ್ಕೌಟ್ಸ್ನಲ್ಲಿ ವಿದ್ಯಾರ್ಥಿಗಳು ಪಡೆಯುವ ಅನುಭವ ಬೇರೆಲ್ಲಿಯೂ ಸಿಗಲಿಕ್ಕಿಲ್ಲ. ಆದ್ದರಿಂದ ಅದನ್ನು ಬದುಕಲ್ಲಿ ಅಳವಡಿಸಿಕೊಂಡು ಸತ್ಪçಜೆಗಳಾಗಿ ಬಾಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ ಸಹಾಯಕ ಆಯುಕ್ತೆಯಾಗಿರುವ ಸುಮನಾ ಶೇಖರ್ ಮಾತನಾಡಿ, ಶಿಬಿರಕ್ಕೆ ಶುಭ ಹಾರೈಸಿದರು.
ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಡೊಮಿನಿಕ್ ಅಂದ್ರಾದೆ ಅವರು ಮಾತನಾಡಿ, ಬದಲಾದವಣೆ ಜಗದ ನಿಯಮ ವಿದ್ಯಾರ್ಥಿಗಳಾದ ನೀವು ನಿಮ್ಮಲ್ಲಿ ಉತ್ತಮ ಬದಲಾವಣೆಯನ್ನು ತಂದುಕೊಂಡು ಉತ್ತಮ ನಾಗರಿಕರಾಗಿ ಬಾಳಿ ಎಂದು ಕರೆ ನೀಡಿದರು.
ಉಡುಪಿ ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ ಪೈ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಕಳ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆಯಾಗಿರುವ ಸಾವಿತ್ರಿ ಮನೋಹರ್, ಸ್ಕೌಟ್ಸ್ ಮತ್ತು ಗೈಡ್ಸ್ನ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಜಗದೀಶ್ ಹೆಗ್ಡೆ, ಶಿಕ್ಷಕ ರಕ್ಷಕ ಸಂಘದ ಪ್ರೌಢಶಾಲಾ ವಿಭಾಗದ ಅಧ್ಯಕ್ಷೆಯಾದ ಹೇಮಲತಾ ಹಾಗೂ ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಮೇರಿಯನ್ ಡಿಸೋಜಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ವಿದ್ಯಾಶ್ರೀ ಸ್ವಾಗತಿಸಿ, ಜಯಲಕ್ಷ್ಮಿ ಸುರೇಶ್ ವಂದಿಸಿದರು. ರೇಖಾ ಸಂತೋಷ್ ಅವರು ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post