ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ (ಸಿಎಸ್-ಇಇಟಿ)ಯಲ್ಲಿ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ.
ಸಂಸ್ಥೆಯಿಂದ ಒಟ್ಟು ಐದು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ ನಾಲ್ಕು ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಸಂಸ್ಥೆಯು ಅಭೂತಪೂರ್ವ ಸಾಧನೆಗೈದಿದ್ದು, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ನಾರಾಯಣಿ ಕಿಣಿ (138/200), ಪವನ್ ಪೂಜಾರಿ (119/200), ಚರಣ್ರಾಜ್ (118/200), ಶ್ರೇಯಸ್ ಆಚಾರ್ಯ (100/200) ಉತ್ತೀರ್ಣರಾದ ವಿದ್ಯಾರ್ಥಿಗಳಾಗಿದ್ದಾರೆ.
Also read: ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಈ ಎಲ್ಲಾ ವಿದ್ಯಾರ್ಥಿಗಳು ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ಸಿಎ ಮತ್ತು ಸಿಎಸ್ ತರಬೇತಿ ತಂಡದಿಂದ ತರಬೇತಿಯನ್ನು ಪಡೆದುಕೊಂಡಿದ್ದರು. ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ತರಬೇತಿ ನೀಡಿದ ಉಪನ್ಯಾಸಕ ತಂಡ ಹಾಗೂ ಸಂಸ್ಥೆಯ ಬೋಧಕವರ್ಗದವರು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post