ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಹದಿಹರೆಯದಲ್ಲಿ ಆಕರ್ಷಣೆ ಜಾಸ್ತಿ ಇರುತ್ತದೆ. ಆದ್ದರಿಂದ ದುಶ್ಚಟಗಳಿಗೆ ಬೇಗನೆ ಒಳಗಾಗುತ್ತಾರೆ. ಮಾದಕ ದ್ರವ್ಯ ಸೇವನೆಯ ದುಶ್ಚಟಕ್ಕೆ ಬಲಿ ಬಿದ್ದರೆ ಜೀವನವೇ ಸರ್ವನಾಶವಾಗಿ ಹೋಗುತ್ತದೆ ಎಂದು ಕಾರ್ಕಳ ನಗರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮುರಳೀಧರ ನಾಯ್ಕ್ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ #Christ King PU College ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನದ #Drug Addiction ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ವೇದಿಕೆಯಲ್ಲಿ ಸಂಸ್ಥೆಯ ಮಾದಕ ದ್ರವ್ಯ ವಿರೋಧಿ ಸಮಿತಿಯ ಅಧ್ಯಕ್ಷರಾದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಸಮಿತಿಯ ಉಪನ್ಯಾಸಕ ಸದಸ್ಯರಾದ ರಸಾಯನಶಾಸ್ತ್ರ ಉಪನ್ಯಾಸಕಿ ನಯನ, ಭೌತಶಾಸ್ತ್ರ ಉಪನ್ಯಾಸಕ ಪದ್ಮನಾಭ ನಾಯಕ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ ಮುಂತಾದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post