ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಎಲ್ಲರೂ ಸ್ವಚ್ಛತೆಯನ್ನು ಕಾಪಾಡುವುದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದರು.
ಪರಿಸರದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Also read: ಎಲ್ಲಾ ಶಂಕರ ಮಠಗಳಲ್ಲಿ ಅದ್ವೈತ ಭಾವ ಅಗತ್ಯ: ರಾಘವೇಶ್ವರ ಶ್ರೀ
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ ಶೆಟ್ಟಿ ರವರು ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ‘ ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡುವುದು ನಮ್ಮೆಲ್ಲರ ಕರ್ತವ್ಯ. ಪ್ರಕೃತಿಯನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿಕೊಡಬೇಕಾದರೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಇದು ನಾವು ಅವರಿಗೆ ನೀಡುವ ಉತ್ತಮ ಉಡುಗೊರೆಯಾಗಿದೆ. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ‘ ಎಂದರು.

ಜೋಡುರಸ್ತೆಯಿಂದ ಹಿರ್ಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಜೂರುವರೆಗೆ, ಮಾವಿನಕಟ್ಟೆಯಿಂದ ಕಾನಂಗಿ ವೆಂಕಟೇಶ್ವರ ದೇವಸ್ಥಾನದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ, ವಾಹನ ಸಂಚಾರಕ್ಕೆ ಅಡಚಣೆಯಾಗುವಂತಿದ್ದ ಗಿಡಗಂಟಿಗಳ ನಿರ್ಮೂಲನೆ ಮಾಡಿ ವಾಹನಗಳ ಸುಲಲಿತ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post