ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ರಾಜ್ಯ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೆಂಗಳೂರು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಇವುಗಳ ಜಂಟಿ ಸಾರಥ್ಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಬಜಗೋಳಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಐವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Also read: ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬದುಕಿಗೆ ‘ಸಂಜೀವಿನಿ’ ಯೋಜನೆಯ ಬೆಳಕು
ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಅನ್ಸಿಫಾ ಬಾನು ಪ್ರಥಮ, ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸುದೀಕ್ಷಾ ಶೆಟ್ಟಿ ಪ್ರಥಮ, ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಶ್ರೇಯಸ್ ಆಚಾರ್ಯ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಯಾ ಪ್ರಥಮ, ಭಿತ್ತಿಪತ್ರ ರಚನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸೃಜನ್ ಭಂಡಾರಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಸಂಸ್ಥೆಯ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post