ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿದ್ಯಾರ್ಥಿಗಳು ಸವಾಲುಗಳನ್ನು ಸ್ವೀಕರಿಸಬೇಕು, ಬಲಿಷ್ಟ ಮನೋಬಲವೊಂದಿದ್ದರೆ ಮನುಷ್ಯನ ಮುಂದೆ ಅಸಾಧ್ಯವಾದ ಕೆಲಸ ಯಾವುದೂ ಇಲ್ಲ ಎಂದು ವ್ಯಕ್ತಿತ್ವ ವಿಕಸನ ಅಂತಾರಾಷ್ಟಿçÃಯ ತರಬೇತುದಾರ ಹಾಗೂ ಇನ್ನಾ ಎಂ.ವಿ. ಶಾಸ್ತ್ರೀ ಪ್ರೌಢಶಾಲಾ ಮುಖ್ಯಶಿಕ್ಷಕ ರಾಜೇಂದ್ರ ಭಟ್ ಕರೆ ನೀಡಿದರು.
ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಮುಗಿಸಿ ದ್ವಿತೀಯ ಪಿಯುಸಿಗೆ ಸೇರ್ಪಡೆಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಪುನಶ್ಚೇತನ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಂವಾದ ಕಾರ್ಯಕ್ರಮ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಈಗಿನ ವಿದ್ಯಾರ್ಥಿಗಳು ರಾಷ್ಟç ಮತ್ತು ಅಂತಾರಾಷ್ಟಿçÃಯ ಮಟ್ಟದ ಸ್ಪರ್ಧೆಗಳಿಗೆ ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳಬೇಕು. ಮಕ್ಕಳು ನಮಗಾಗಿ ನಾವು ವಿದ್ಯಾರ್ಜನೆಗೈಯಬೇಕು ಎಂಬ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಜೊತೆಗೆ ಋಣಾತ್ಮಕ ಮನೋಭಾವವನ್ನು ಸಂಪೂರ್ಣವಾಗಿ ತ್ಯಜಿಸಬೇಕು’ ಎಂದರು.

Also read: ಸೂಲಿಬೆಲೆಗೆ ಸಾಂವಿಧಾನಿಕ ಜಯ | ಚಿತ್ತಾಪುರ ಕಾರ್ಯಕ್ರಮಕ್ಕೆ ಹೇರಿದ್ದ ನಿರ್ಬಂಧ ಕೋರ್ಟ್’ನಿಂದ ರದ್ದು
ಸಂಸ್ಥೆಯ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post