ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿದ್ಯಾರ್ಥಿಗಳಲ್ಲಿ ನಾಯಕತ್ವ ಮನೋಭಾವ ಬೆಳೆಯಬೇಕೆಂದರೆ ಅನ್ವೇಷಣೆಯಂತಹ ಕಾರ್ಯಕ್ರಮ ಅತೀ ಮುಖ್ಯ ಎಂದು ಕಾರ್ಕಳದ ವಕೀಲರಾದ ಎಚ್. ಎಮ್. ಶಶಿರೇಖಾ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪದವಿಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ‘ಅನ್ವೇಷಣೆ 2024’ ಕಾರ್ಯಕ್ರಮಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಇನ್ನೋರ್ವ ಅತಿಥಿ ಕಾರ್ಕಳ ಸಿಟಿ ಲಯನ್ಸ್ ಕಬ್ಲ್‌ನ ಅಧ್ಯಕ್ಷರಾದ ಜ್ಯೋತಿ ರಮೇಶ್ ಮಾತನಾಡಿ, ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಲು ಅನ್ವೇಷಣೆ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯರಾದ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ವಿದ್ಯಾರ್ಥಿಗಳ ನಾಳಿನ ಭವಿಷ್ಯವನ್ನು ನಿರ್ಧರಿಸಲು ಇಂದು ಸುದಿನವಾಗಿರುತ್ತದೆ. ಅವಕಾಶಗಳು ಎಲ್ಲರಿಗೂ ಸಮಾನವಾಗಿ ಸಿಗುತ್ತದೆ, ಸಿಕ್ಕಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಂಡವರು ಜಯಶಾಲಿಗಳಾಗಬಹುದು ಎಂದು ಹೇಳಿದರು.
ಕಾರ್ಕಳ ಆಯಿಷಾ ಜ್ಯುವೆಲರ್‍ಸ್‌ನ ಮಾಲಿಕರಾದ ಮೊಹಮ್ಮದ್ ಅಸ್ಲಂ, ಕಾರ್ಕಳ ಬಸ್ಸು ಎಜೆಂಟರ ಸಂಘದ ಅಧ್ಯಕ್ಷರಾದ ರಾಜೇಂದ್ರ ಪ್ರಸಾದ್, ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷೆ ಕವಿತಾ ಪಾಯಸ್, ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಡಿಸೋಜ ಅವರು ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್ ಪ್ರಸ್ತಾವನೆಗೈದರು, ಸುಕನ್ಯಾ ಜೈನ್ ಸ್ವಾಗತಿಸಿ, ದೀಪಕ್ ಕೆ ಅವರು ನಿರೂಪಿಸಿ ವಂದಿಸಿದರು.
Also read: ದೇವೇಗೌಡರ ಕುಟುಂಬ ಖರೀದಿಸಲು ಹಣ ಎಲ್ಲಿಂದ ಬಂದಿದೆ?: ಪ್ರತಿಪಕ್ಷ ನಾಯಕ ಆರ್. ಅಶೋಕ
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಪಾಲಿಮಾರು ಇಲ್ಲಿನ ನಿವೃತ್ತ ಉಪ ಪ್ರಾಚಾರ್ಯರಾದ ಶ್ರೀ ಶಿವಾನಂದ ಕೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕ್ರೈಸ್ಟ್‌ಕಿಂಗ್ ವಿದ್ಯಾಸಂಸ್ಥೆಯ ಶಿಕ್ಷಕ- ರಕ್ಷಕ ಸಂಘದ ಮಾಜಿ ಅಧ್ಯಕ್ಷ ಶ್ರೀ ಬಾಲಕೃಷ್ಣ ಶೆಟ್ಟಿ ಅತಿಥಿಗಳಾಗಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಬಹುಮಾನ ವಿತರಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಕ್ರೈಸ್ಟ್‌ಕಿಂಗ್ ಅಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರುಢಾಲ್ಫ್ ಕಿಶೋರ್ ಲೋಬೋ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಪಾವನ ಇವರು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು ಹಾಗೂ ಉಪನ್ಯಾಸಕಿ ಶಿಜಿ ಸಿ ಕೆ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆಗೈದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post