ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಂದು ಪ್ರಕೃತಿ ವಿನಾಶದ ಅಂಚಿನೆಡೆಗೆ ಸಾಗುತ್ತಿದೆ. ಪ್ರಕೃತಿಗೆ ಪ್ರತಿಯೊಂದು ಗಿಡವೂ ಅತ್ಯಗತ್ಯ. ಪ್ರತಿಯೊಬ್ಬರೂ ಕನಿಷ್ಠ ಎರಡು ಗಿಡಗಳನ್ನಾದರೂ ನೆಟ್ಟು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಉಡುಪಿ ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಹೇಳಿದರು.
ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಇಂದು ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

Also read: ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ, ಪರಿಸರ ಉಳಿಸುವುದು ಪ್ರತಿಯೊಬ್ಬರ ಹೊಣೆ: ಸಿಎಂ ಸಿದ್ಧರಾಮಯ್ಯ
ಕಾರ್ಯಕ್ರಮದಲ್ಲಿ ಕಾಲೇಜು ವಿಭಾಗದ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್ ಹಾಗೂ ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಡೊಮಿನಿಕ್ ಅಂದ್ರಾದೆಯವರು ಉಪಸ್ಥಿತರಿದ್ದರು.
10ನೇ ತರಗತಿಯ ವಿದ್ಯಾರ್ಥಿಗಳು ಪರಿಸರ ಗೀತೆಯನ್ನು ಹಾಡಿದರು. ಶಿಕ್ಷಕಿಯಾದ ವಿಜೇತರವರು ಪರಿಸರ ದಿನದ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ಶಿಕ್ಷಕಿಯರಾದ ನೀತಿ ಸ್ವಾಗತಿಸಿ, ರಶ್ಮಿ ವಂದಿಸಿ, ದಿವ್ಯ ರಾವ್ ನಿರೂಪಿಸಿದರು.












Discussion about this post