ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಕ್ರಿಯೇಟಿವ್ ಕಾಲೇಜಿನ ಐವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾವಳಿ ನಡೆದಿತ್ತು. ಇದರಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿದ್ದರು.
ಈ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿಯಾರಾದ ಮಾನಸ ವಿನಾಯಕ್, ಹರ್ಷಿತ ವಿನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post