ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ನಮ್ಮ ಸುತ್ತ ನಕಾರಾತ್ಮಕ ಸಂಗತಿಗಳು ಸುತ್ತುತ್ತಿರುತ್ತವೆ. ಆದರೆ ನಾವು ಯಾವಾಗಲೂ ಧನಾತ್ಮಕವಾಗಿ ಯೋಚನೆ ಮಾಡಬೇಕು ಎಂದು ಉದ್ಯೋಗ ಮತ್ತು ಕೌಶಲ್ಯ ತರಬೇತುದಾರ ಚಂದನ್ ರಾವ್ ಹೇಳಿದರು.
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸಿಎ ಮತ್ತು ಸಿಎಸ್ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ನಾಳೆಗಳಿಗೆ ಕಾಯದೆ ಜೀವನದಲ್ಲಿ ಇಂದು ಬರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಯಶಸ್ಸಿನ ಬೆನ್ನು ಹತ್ತಬೇಕಾದರೆ ಆತ್ಮವಿಶ್ವಾಸ ಬಹಳ ಮುಖ್ಯ ಎಂದರು.
Also read: ಜೀವನದುದ್ದಕ್ಕೂ ಪ್ರಾಮಾಣಿಕತೆ ಕಾಪಾಡಿಕೊಳ್ಳಿ: ತಹಶಿಲ್ದಾರ ಗಿರೀಶ್ ಕಿವಿಮಾತು
ಇದೇ ಸಂದರ್ಭದಲ್ಲಿ ಸಿಎ, ಸಿಎಸ್ ಪರೀಕ್ಷೆಗಳಿಗೆ ಮಾಡಬೇಕಾದ ತಯಾರಿ ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಸಂಸ್ಥೆಯ ಸಿಎ, ಸಿಎಸ್ ಸಂಯೋಜಕರಾದ ಸಂಖ್ಯಾಶಾಸ್ತ್ರ ಉಪನ್ಯಾಸಕಿ ಉದಯಶ್ರೀ, ಅರ್ಥಶಾಸ್ತ್ರ ಉಪನ್ಯಾಸಕಿ ಕು.ಅಭಿನಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಸುಕನ್ಯಾ ಜೈನ್ ಅತಿಥಿಗಳನ್ನು ಪರಿಚಯಿಸಿ ದೀಪಕ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post