ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಮಾದಕ ವ್ಯಸನ ಚಟುವಟಿಕೆಗಳಲ್ಲಿ #Drug Addiction Activities ಯಾರಾದರೂ ತೊಡಗಿಕೊಂಡರೆ ಅಂತಹವರಿಗೆ ಕಾನೂನು ರೀತಿಯಲ್ಲಿ ಕಠಿಣ ಕ್ರಮ ನಿಶ್ಚಿತ ಎಂದು ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಶಿವಕುಮಾರ್ ಹೇಳಿದರು.
ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಯೋಜಿಸಲಾಗಿದ್ದ `ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ. ಎಂಬ ಎಚ್ಚರಿಕೆಯ ನುಡಿಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಾನೂನಿನ ಅರಿವನ್ನು ಮೂಡಿಸಿದರು.
ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.
ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ, ದೇಶದ ಕಾನೂನಿಗೆ ನಾವೆಲ್ಲರೂ ತಲೆಬಾಗಿ ಅದನ್ನು ಪರಿಪಾಲಿಸಿದಾಗ ನಮಗೆ ಆತಂಕಗಳಿಲ್ಲ ನಾವೆಲ್ಲರೂ ಸುರಕ್ಷಿತ. ಎಂದರು.
ವೇದಿಕೆಯಲ್ಲಿ ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸೆö್ಟÃಬಲ್ ಸಂತೋಷ್ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಸಂತೋಷ್ ನಿರೂಪಿಸಿ, ವಂದಿಸಿದರು. ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Also Read: 123
Discussion about this post