ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ ಇವರ ಆಶ್ರಯದಲ್ಲಿ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 14/17ರ ವಯೋಮಿತಿ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ 14ರ ವಯೋಮಿತಿಯ ಬಾಲಕಿಯರ ತಂಡ ಹಾಗೂ ಪ್ರೌಢಶಾಲೆಯ 17ರ ವಯೋಮಿತಿಯ ಬಾಲಕರ ತಂಡಗಳು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿವೆ.
14ರ ವಯೋಮಿತಿಯ ಬಾಲಕಿಯರ ತಂಡವನ್ನು ಪ್ರತಿನಿಧಿಸಿದ್ದ ಎಂಟನೇ ತರಗತಿಯ ಖುಷಿ ಶೆಟ್ಟಿ, ಆರನೇ ತರಗತಿಯ ತ್ರಿಷ್ಮ ಎಸ್ ಹಾಗೂ ಕೆಟ್ಲಿನ್ ಏಂಜೆಲ್ ಪಿಂಟೊ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾದರೆ ಪ್ರೌಢಶಾಲಾ ಬಾಲಕರ ೧೭ರ ವಯೋಮಿತಿಯ ತಂಡವನ್ನು ಪ್ರತಿನಿಧಿಸಿದ್ದ ಹತ್ತನೇ ತರಗತಿಯ ಗೌರವ್ ಆರ್, ಪ್ರಥಮ್ ಶೆಟ್ಟಿ, ಶೋಭಿತ್ ಕೆ ಎಚ್ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post