ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ #SSLC Result ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪ್ರಕೃತಿ ಪಿ ಗುಡಿಗಾರ್ 625ಕ್ಕೆ 624 ಅಂಕಗಳನ್ನು ಪಡೆದು ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದುಕೊಂಡಿದ್ದಾರೆ.
ಇವರು ಕೆರ್ವಾಶೆ ನಿವಾಸಿ ಪ್ರಕಾಶ್ ಗುಡಿಗಾರ್ ಹಾಗೂ ವಸಂತಿ ದಂಪತಿಗಳ ಪುತ್ರಿಯಾಗಿದ್ದಾಳೆ. ಜೊತೆಗೆ ಇದೇ ಸಂಸ್ಥೆಯ ಆದಿಶ್ರೀ ಎಂ ಆಚಾರ್ಯ 618 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ಎಂಟನೇ ರ್‍ಯಾಂಕ್ ಪಡೆದುಕೊಂಡಿದ್ದಾಳೆ. ಈಕೆ ಪರಪ್ಪು ನಿವಾಸಿ ತ್ಯಾಗರಾಜ್ ಎಂ ಹಾಗೂ ಶಶಿರೇಖಾ ಎಚ್ ಎಂ ದಂಪತಿಗಳ ಪುತ್ರಿಯಾಗಿದ್ದಾಳೆ. ಸಾಧಕರನ್ನು ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post