ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ #Christ King ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ಶೈನಿ ಡಿಸೋಜ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಆಶ್ರಯದಲ್ಲಿ ಮಣಿಪಾಲದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ 14/17ರ ವಯೋಮಿತಿಯ 200 ಮೀ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ ಪದಕ, 100 ಮೀ ಫ್ರೀ ಸ್ಟೈಲ್ ಮತ್ತು 100 ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕಗಳನ್ನು ಪಡೆದುಕೊಳ್ಳುವುದರ ಮೂಲಕ ಶೈನಿ ಡಿಸೋಜ ರಾಜ್ಯಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದುಕೊಂಡಿದ್ದಾಳೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post