ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕರಾಟೆ ಪಂದ್ಯಾವಳಿಯಲ್ಲಿ ಕೈಸ್ಟ್‌ಕಿಂಗ್ ಶಾಲೆಯ ಆರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚರ್ಚ್ ಆಂಗ್ಲಮಾಧ್ಯಮ ಶಾಲೆ ಅಜೆಕಾರು ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಟ್ಟು ಆರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದ ಆರನೇ ತರಗತಿಯ ಅಕ್ಷಯ್ ಪ್ರಭು, ಶಾರ್ವಿ ಏಳನೇ ತರಗತಿಯ ಅದ್ವಿತ್ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ಶಗುನ್ ವರ್ಮಾ, ಆಯುಶ್ರೀ, ಹತ್ತನೇ ತರಗತಿಯ ಸಾವನ್ ವರ್ಮಾ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಉಳಿದಂತೆ ಏಳನೇ ತರಗತಿಯ ಸಮ್ಯುಗ್, ಸ್ಮಿತಿ ಒಂಬತ್ತನೇ ತರಗತಿಯ ಶೇಖ್ ಮೊಹಮ್ಮದ್ ರಿಫಾಝ್, ಅಬ್ದುಲ್ ಅಝೀಝ್ ಸಫ್ವಾನ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್, ಪ್ರಕಾಶ್ ನಾಯ್ಕ್, ಕು.ಲಾವಣ್ಯ ತಂಡದ ನೇತೃತ್ವ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post