ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ, ಎಸ್.ವಿ.ಟಿ ಪ್ರೌಢಶಾಲೆ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ Christ King ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಒಟ್ಟು ಹತ್ತು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಶಾಲೆಯ ಆರನೇ ತರಗತಿಯ ಸಾಕ್ಷಿತ್.ಪಿ ಜೈನ್, ಆಯುಶ್ರೀ ಎಂ.ಆಚಾರ್ಯ, ಫಿಯೋನಾ ಡಿಸೋಜ, ಸಾನ್ವಿ ನಾಯಕ್, ಏಳನೇ ತರಗತಿಯ ಬಿಲಾಲ್ ಶೇಖ್, ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ರೇಚಲ್ ಡಿಸೋಜ, ಹತ್ತನೇ ತರಗತಿಯ ನೇಹಾ.ವಿ, ದಿಶಾ ಡಿಮೆಲ್ಲೊ, ರವೀನಾ ಕನ್ವರ್, ಡೆನಿಕಾ ಶೆನನ್ ಕುಂದರ್ ತಾಲೂಕು ಮಟ್ಟದ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ಪಂದ್ಯಾಟದಲ್ಲಿ ಸಂಸ್ಥೆಯ ಆರನೇ ತರಗತಿಯ ಕೆವಿನ್ ದಾಂತಿ, ಆರ್ಯನ್ ಶೆಟ್ಟಿ, ಸಾನ್ವಿ ಶೆಟ್ಟಿ, ರಿತು ಫ್ರಾನ್ಸಿಸ್, ಡೇನಿಯಲ್ ಸಾಲ್ಡಾನ್ಹ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಕು.ಲಾವಣ್ಯ ಶೆಟ್ಟಿ, ಪ್ರಕಾಶ್ ನಾಯ್ಕ್, ಕೃಷ್ಣಪ್ರಸಾದ್ ತಂಡಗಳ ನೇತೃತ್ವ ವಹಿಸಿದ್ದರು.
Also read: ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post