ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಮಕ್ಕಳು ತಮ್ಮ ಮನೆ ಮತ್ತು ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡಾಗ ದೇಶ ಸ್ವಚ್ಚವಾಗುತ್ತದೆ. ದೇಶದ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದೇ ಸಾರ್ಥಕ ಗಾಂಧಿ ಜಯಂತಿ ಆಚರಣೆ ಎಂದು ತೆಳ್ಳಾರು ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು, ಸಾಹಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಉಪಾಧ್ಯಕ್ಷೆ ಸಾವಿತ್ರಿ ಮನೋಹರ್ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ #Mahathma Gandhi ಹಾಗೂ ಲಾಲ್ ಬಹದ್ದೂರು ಶಾಸ್ತ್ರೀ #Lalbahadhur Shasthri ಅವರ ಜಯಂತಿ ಆಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು, ತಿದ್ದಿ ಮುನ್ನಡೆದಾಗ ಗಾಂಧಿಯಾಗಲು ಸಾಧ್ಯ. ಅದೇ ರೀತಿ ಸರಳ ಜೀವನ ಜೀವನ ಸಾಗಿಸಿದ ಲಾಲ್‌ಬಹದ್ದೂರ್ ಶಾಸ್ತ್ರಿಯವರ ಬದುಕು ನಮಗೆ ಆದರ್ಶ. ಗಾಂಧಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
Also read: ಮಹಾತ್ಮರ ಆದರ್ಶ ಬದುಕು ಯುವಕರಿಗೆ ಇಂದಿಗೂ ಪ್ರಸ್ತುತ: ಪ್ರಾಚಾರ್ಯ ಡಾ. ವೀರೇಂದ್ರ ಅಭಿಪ್ರಾಯ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ, ಜಯಂತಿಗಳನ್ನು ಆಚರಿಸುವ ಉದ್ದೇಶ ಮಹಾ ವ್ಯಕ್ತಿಗಳ ಶ್ರೇಷ್ಟ ಗುಣಗಳು ಹಾಗೂ ಆದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದಾಗಿದೆ. ಗಾಂಧೀಜಿ ಅವರ ಆದರ್ಶಗಳನ್ನು ಇಡೀ ಜಗತ್ತೇ ತನ್ನಲ್ಲಿ ಅಳವಡಿಸಿಕೊಂಡಿದೆ. ಸ್ವಚ್ಚ ಪರಿಸರದ ಜೊತೆಗೆ ಸ್ವಚ್ಚ ಮನಸ್ಸು ಕೂಡಾ ನಮ್ಮದಾಗಬೇಕು. ಸ್ವಚ್ಚ ಮನಸ್ಸಿನಿಂದ ಸ್ವಚ್ಚ ದೇಶ ನಿರ್ಮಾಣವಾಗುತ್ತದೆ ಎಂದು ಹೇಳಿದರು.
ಶಿಕ್ಷಕ-ರಕ್ಷಕ ಸಂಘದ ಪ್ರೌಢಶಾಲಾ ವಿಭಾಗದ ಅಧ್ಯಕ್ಷರಾದ ಪ್ರಕಾಶ್ ಡಿಸೋಜ ಅವರು ಸಂದರ್ಭೋಚಿತವಾಗಿ ಮಾತನಾಡಿದರು.
ಅತಿಥಿಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ಬಹದ್ದೂರು ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ಸಮಾಲೋಚಕಿ ಸಿ.ಡಾ.ಶಾರ್ಲೆಟ್ ಸಿಕ್ವೇರಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿಪೂರ್ವ ವಿಭಾಗದ ರಾಜೇಶ್ ಕುಂದರ್, ಪ್ರಾಥಮಿಕ ವಿಭಾಗದ ಲಿನೆಟ್ ಮರಿನಾ ಡಿಸೋಜ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಸಂಸ್ಥೆಯ ಸ್ಕೌಟ್ ಮತ್ತು ಗೈಡ್ಸ್, ರೋವರ್‍ಸ್ ಮತ್ತು ರೇಂಜರ್‍ಸ್ ಘಟಕದವರು ಹಾಗೂ ವಿದ್ಯಾರ್ಥಿಗಳು ಸ್ವಚ್ಚ ಭಾರತದ ಅಂಗವಾಗಿ ಕಾಲೇಜು ಪರಿಸರ, ಗಾಂಧಿ ಮೈದಾನ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳ ಸ್ವಚ್ಚತಾ ಕಾರ್ಯ ಕೈಗೊಂಡರು. ಶಿಕ್ಷಕಿ ರೂಪಾಲಿ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post