ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ #ChristKing ವಿಶ್ವ ಪರಿಸರ ದಿನಾಚರಣೆಯನ್ನು ಫಾ. ಎಫ್.ಪಿ.ಎಸ್. ಮೋನಿಸ್ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಐ. ಕ್ರಿಸ್ಟೋಫರ್ ಕೋಟ್ಯಾನ್ ಅವರು ಮಾತನಾಡಿ, “ವಿಶ್ವ ಪರಿಸರ ದಿನವು ಪ್ರಕೃತಿಯ ಹುಟ್ಟುಹಬ್ಬದಂತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ತಾಯಿಯ ಹೆಸರಿನಲ್ಲಿ ಒಂದು ಗಿಡವನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು” ಎಂದು ಕರೆ ನೀಡಿದರು.
Also Read>> ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ
ಈ ಸಂದರ್ಭದಲ್ಲಿ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ದೀಪ್ತಿ ಹಾಗೂ ಏಳನೇ ತರಗತಿಯ ವಿದ್ಯಾರ್ಥಿ ಆ್ಯಶ್ನನ್ ಡಿಸೋಜಾ ಪರಿಸರ ದಿನಾಚರಣೆಯ ಮಹತ್ವ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಬಳಿಕ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಉಪಪ್ರಚಾರ್ಯರಾದ ಸಿ. ಜಾಲಿ ಜೇಕಬ್ ಉಪಸ್ಥಿತರಿದ್ದರು. ಏಳನೇ ತರಗತಿಯ ವಿದ್ಯಾರ್ಥಿನಿ ನಿಯೋನಾ ಮೆಂಡೋನ್ಸಾ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news











Comments 1