ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿಶ್ವ ಹೃದಯ ದಿನಾಚರಣೆಯ #World Heart Day ಪ್ರಯುಕ್ತ ವಿವಿಧ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ವಾಕಥಾನ್ ಹೃದಯ ದಿನಾಚರಣೆಯ ಅವಾರ್ಡ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ.
ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಭುವನೇಂದ್ರ ಕಾಲೇಜು, ಕಾರ್ಕಳ ಹಾಗೂ ಕಾರ್ಕಳ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಇವುಗಳ ಜಂಟಿ ಆಶ್ರಯದಲ್ಲಿ ವಾಕಥಾನ್ ಹೃದಯ ದಿನಾಚರಣೆಯ ಅವಾರ್ಡ್ ಸ್ಪರ್ಧೆ ಆಯೋಜಿಸಲಾಗಿತ್ತು.
ಗರಿಷ್ಠ ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ಪ್ರಥಮ ಸ್ಥಾನ, ಅತ್ಯಂತ ಶಿಸ್ತಿನ ತಂಡಕ್ಕೆ ಪ್ರಥಮ ಸ್ಥಾನ, ಘೋಷಣೆ ಕೂಗುವಿಕೆಯಲ್ಲಿ ಪ್ರಥಮ, ಸ್ಕಿಟ್ ಸ್ಪರ್ಧೆಯಲ್ಲಿ ದ್ವಿತೀಯ, ಫ್ಲಕಾರ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಪ್ರಶಂಸಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post