ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿಶ್ವ ಶಾಲಾ ಮಕ್ಕಳ U15 ವಾಲಿಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಭಾರತದ ಬಾಲಕಿಯರ ವಾಲಿಬಾಲ್ ತಂಡದ ನಾಯಕಿಯಾಗಿ ತಂಡವನ್ನು ಮುನ್ನಡೆಸಿ ಉತ್ತಮ ಪ್ರದರ್ಶನ ನೀಡಿದ ಕ್ರೈಸ್ತಕಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಶಗುನ್ ಎಸ್ ವರ್ಮ ಹೆಗ್ಡೆಗೆ ಇಂದು ಅದ್ಧೂರಿ ಸ್ವಾಗತ ಕೋರಲಾಯಿತು.
ಡಿಸೆಂಬರ್ 4 ರಿಂದ 13 ವರಗೆ ಚೀನಾದಲ್ಲಿ ನಡೆದ ವಿಶ್ವ ಶಾಲಾ ಮಕ್ಕಳ U15 ವಾಲಿಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಭಾರತದ ಬಾಲಕಿಯರ ವಾಲಿಬಾಲ್ ತಂಡದ ನಾಯಕಿಯಾಗಿ ತಂಡವನ್ನು ಮುನ್ನಡೆಸಿ ಉತ್ತಮ ಪ್ರದರ್ಶನ ನೀಡಿ, ಕರ್ನಾಟಕದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕ್ರೈಸ್ತಕಿಂಗ್ ಶಿಕ್ಷಣ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಶಗುನ್ ಎಸ್ ವರ್ಮ ಹೆಗ್ಡೆ ತಾಯ್ನಾಡಿಗೆ ಮರಳುತ್ತಿರುವ ಸಂದರ್ಭದಲ್ಲಿ ಅವರನ್ನು ಗೌರವಪೂರ್ಣವಾಗಿ ಇಂದು ಬೆಳಿಗ್ಗೆ ಅನಂತಶಯನ ವೃತ್ತದಿಂದ ಕ್ರೈಸ್ತಕಿಂಗ್ ಶಿಕ್ಷಣ ಸಂಸ್ಥೆಯವರೆಗೆ ಸ್ವಾಗತ ಮೆರವಣಿಗೆ ಆಯೋಜಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















