ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ವಿಶ್ವಾಶಾಲಾ ಬಾಲಕಿಯರ ವಿಭಾಗದ ವಿಶ್ವವಾಲಿಬಾಲ್ ಪಂದ್ಯಾಟದ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾಳೆ.
ಇವಳು 15ರ ವಯೋಮಿತಿಯ ಭಾರತೀಯ ವಾಲಿವಾಲ್ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಆಟಗಾರ್ತಿ. ಅಂತರಾಷ್ಟ್ರೀಯ ಪಂದ್ಯವು ಇದೇ ಡಿಸೆಂಬರ್ ತಿಂಗಳ 4 ರಿಂದ 13ನೇ ತಾರೀಖಿನವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯಲಿದ್ದು ಭಾರತ ತಂಡವನ್ನು ಪ್ರತಿನಿಧಿಸುವ ಕಾರ್ಕಳ ಹೆಮ್ಮೆಯ ಕ್ರೀಡಾಪಟುವಾಗಿದ್ದಾಳೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post