ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಮಕ್ಕಳಿಗೆ ಕಾರ್ಯ ಸಾಧ್ಯವಾಗಲು ಮಾನಸಿಕ ಸಮತೋಲನ ಅಗತ್ಯ. ಯೋಗ ಮಾಡುವುದರ ಮೂಲಕ ಇದನ್ನು ಸಾಧಿಸಬಹುದು ಎಂದು ಬೆಳ್ಮಣ್ ಸ. ಪ. ಪೂ. ಕಾಲೇಜಿನ ಉಪನ್ಯಾಸಕಿ ಹಾಗೂ ಯೋಗ ತರಬೇತುದಾರರಾದ ಮಾಲತಿ ಪೈ ತಿಳಿಸಿದರು.
ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಯವರು ಆಗಮಿಸಿ, ತರಬೇತಿ ನೀಡಿ ಅವರು ಮಾತನಾಡಿ, ವ್ಯಕ್ತಿತ್ವ ವಿಕಸನದಲ್ಲಿ ಯೋಗದ ಮಹತ್ವದ ಬಗ್ಗೆ ತಿಳಿಸಿದರು.
Also read: ಆ.22: ರೇಡಿಯೋ ಶಿವಮೊಗ್ಗದಲ್ಲಿ ಜನತಾ ಜಾಗೃತಿ ಬಾನುಲಿ ಸರಣಿ
ಪ್ರೌಢಶಾಲಾ ಮುಖ್ಯಶಿಕ್ಷಕ ಡೊಮಿನಿಕ್ ಅಂದ್ರಾದೆ, ಪದವಿ ಪೂರ್ವ ವಿಭಾಗದ ಹಿಂದಿ ಉಪನ್ಯಾಸಕಿ ಶಾಹಿನಾ ಬಾನು ಹಾಗೂ ಸಂಸ್ಥೆಯ ಆಡಳಿತಾಧಿಕಾರಿ ವಿನಯ್ ಕುಮಾರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ವಿಭಾಗದ ಹಿಂದಿ ಶಿಕ್ಷಕಿ ಶ್ರೀಮತಿ ಶಮೀನಾ ಬಾನು ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಒಂಬತ್ತನೇ ತರಗತಿಯ ಶಾನ್ವಿ ಕಾರ್ಯಕ್ರಮ ನಿರೂಪಿಸಿ ಲೆನಿಶ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post