ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ #KCCI ವತಿಯಿಂದ ಜೂನ್ 22ರಂದು ಕರ್ನಾಟಕ ಬಂದ್’ಗೆ ಕರೆ ನೀಡಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ #Congress ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ವಿದ್ಯುತ್ ದರವನ್ನು ಏರಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ದರ ಏರಿಕೆಯನ್ನು ಹಿಂಪಡೆಯುವಂತೆ ಜೂನ್ 10ರವರೆಗೂ ಕಾಂಗ್ರೆಸ್ ಸರ್ಕಾರಕ್ಕೆ ಕೆಸಿಸಿಐ ಗಡುವು ನೀಡಿ, ಪ್ರತಿಭಟನೆಯ ಎಚ್ಚರಿಕೆಯನ್ನೂ ಸಹ ನೀಡಿತ್ತು. ಆದರೆ, ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದ ಹಿನ್ನೆಲೆಯಲ್ಲಿ ಜೂನ್ 22 ರಂದು ಕರ್ನಾಟಕ ಬಂದ್’ಗೆ #KarnatakaBandh ಕರೆ ನೀಡಲಾಗಿದೆ.
ದೇಶದ ರಾಜ್ಯವೊಂದರಲ್ಲಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಒಂದೇ ತಿಂಗಳ ಅವಧಿಯಲ್ಲಿ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯ ಬಂದ್’ಗೆ ಕರೆ ನೀಡಿರುವುದು ಇದೇ ಮೊದಲು ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post