ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದ್ದು, ಈ ಪ್ರಮಾಣವನ್ನು 55600 ಕ್ಯೂಸೆಕ್ಸ್’ಗೆ ಏರಿಕೆ ಮಾಡಲಾಗಿದೆ.
ಈ ಕುರಿತಂತೆ ಭದ್ರಾ ಡ್ಯಾಂ ಅಥಾರಿಟಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಇಂದು ಒಟ್ಟು 56000 ಕ್ಯೂಸೆಕ್ಸ್ ನೀರನ್ನು ಹರಿಸಲಾಗಿದೆ ಎಂದಿದ್ದಾರೆ.
ಇಂದು ಆರಂಭದಲ್ಲಿ ಕ್ರಸ್ಟ್ ಗೇಟ್ ಮೂಲಕ 10 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗಿದ್ದು, ಆನಂತರ 30 ಸಾವಿರ ಕ್ಯೂಸೆಕ್ಸ್ ಬಿಡಲಾಯಿತು. ಆದರೆ, ಒಳಹರಿವಿನ ಪ್ರಮಾಣ ಹೆಚ್ಚಾದ ಕಾರಣ ಮತ್ತೆ 5 ಸಾವಿರ ಕ್ಯೂಸೆಕ್ಸ್ ಬಿಡಲಾಗುತ್ತಿದ್ದು, ಒಟ್ಟು ನದಿಗೆ 45 ಸಾವಿರ ಕ್ಯೂಸೆಕ್ಸ್ ನೀರನ್ನು ಕ್ರಸ್ಟ್ ಗೇಟ್ ಮೂಲಕ ಬಿಡಲಾಗಿದೆ. ಒಟ್ಟಾರೆಯಾಗಿ ಇಂದು 55600 ಕ್ಯೂಸೆಕ್ಸ್ ನೀರನ್ನು ಹೊರಕ್ಕೆ ಬಿಡಲಾಗಿದೆ.
ಮುಳುಗಿದ ಹೊಸ ಸೇತುವೆ
ಇನ್ನು, ಭಾರೀ ಪ್ರಮಾಣದಲ್ಲಿ ನದಿಗೆ ನೀರು ಹರಿಸಿರುವ ಪರಿಣಾಮ ಸರ್ಕಾರಿ ಬಸ್ ನಿಲ್ದಾಣದ ಬಳಿಯಿರುವ ಹೊಸ ಸೇತುವೆ ಬಹುತೇಕ ಮುಳುಗಡೆಯಾಗಿದೆ.
ಸೇತುವೆ ಮೇಲ್ಬಾಗದಲ್ಲಿ ನೀರು ಹರಿಯುತ್ತಿದ್ದು, ಎರಡೂ ಕಡೆಗಳಲ್ಲಿ ಬ್ಯಾರಿಕೇಟ್ ಹಾಕಿ ಬಂದ್ ಮಾಡಲಾಗಿದೆ.
Get In Touch With Us info@kalpa.news Whatsapp: 9481252093















