ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಾಲ್ವರು ಕೆಲಸಗಾರರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ.
ಶಾಸಕರ ನಿವಾಸದಲ್ಲಿ ಅಡುಗೆ ಕೆಲಸ ಮಾಡುವವರು ಸೇರಿದಂತೆ ನಾಲ್ವರು ಸಹಾಯಕರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಅವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕರ ನಿವಾಸವನ್ನು ಒಂದು ವಾರಗಳ ಕಾಲ ಸೀಲ್ ಡೌನ್ ಮಾಡಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಅಂದಾಜು ಒಂದು ವಾರಗಳ ಕಾಲ ಮನೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಪರಿಸ್ಥಿತಿ ನೋಡಿಕೊಂಡು ತೆರವುಗೊಳಿಸುವ ಕುರಿತಾಗಿ ನಿರ್ಧರಿಸಲಾಗುತ್ತದೆ. ಈವರೆಗೂ ಶಾಸಕರ ನಿವಾಸಕ್ಕೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಶಾಸಕರ ಆಪ್ತ ವಲಯದಿಂದ ತಿಳಿದುಬಂದಿದೆ.
Get In Touch With Us info@kalpa.news Whatsapp: 9481252093
Discussion about this post