ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಪ್ರತಿವರ್ಷವೂ ಪ್ರವಾಹದಿಂದ ತತ್ತರಿಸುವ ಕವಲಗುಂದಿ ಪ್ರದೇಶದ 30 ಕುಟುಂಬಗಳಿಗೆ ಶಾಶ್ವತ ಪರಿಹಾರವಾಗಿ ಜೇಡಿಕಟ್ಟೆಯಲ್ಲಿ ನಿವೇಶನ ನೀಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಸಭೆ ಆಯುಕ್ತ ಮನೋಹರ್ ತಿಳಿಸಿದರು.
ಭದ್ರಾವತಿ ಕವಲಗುಂದಿ ಪ್ರವಾಹ ಸಂತ್ರಸ್ತರ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ತತಕ್ಷಣದ ಪರಿಹಾರ
Posted by Kalpa News on Monday, 21 September 2020
ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಅವರು, ಕವಲಗುಂದಿಯ 30 ಕುಟುಂಬಗಳಿಗೆ ಜೇಡಿಕಟ್ಟೆಯಲ್ಲಿ ನಿವೇಶನ ನೀಡಿ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ನೀಡುವ ಕುರಿತಾಗಿ ಮೂರು ತಿಂಗಳ ಹಿಂದೆಯೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಶೀಘ್ರದಲ್ಲಿಯೇ ಒಪ್ಪಿಗೆ ದೊರೆಯುವ ನಿರೀಕ್ಷೆಯಿದೆ. ಒಪ್ಪಿಗೆ ದೊರೆತ ತಕ್ಷಣವೇ ಅವರಿಗೆಲ್ಲಾ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.
30 ಕುಟುಂಬಗಳಿಗೆ ತತಕ್ಷಣದ ಪರಿಹಾರವಾಗಿ 10 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಒಂದೆರಡು ದಿನದಲ್ಲಿ ಸಂತ್ರಸ್ತರ ಖಾತೆಗೆ ಜಮೆ ಮಾಡಲಾಗುವುದು. ಈ ಕುರಿತಂತೆ ತಹಶೀಲ್ದಾರ್ ಅವರೊಂದಿಗೆ ಈಗಾಗಲೇ ಚರ್ಚಿಸಿ ನಿರ್ಧರಿಸಲಾಗಿದೆ ಎಂದರು.
ವಾರ ಭವಿಷ್ಯ: ನಿಖರ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ: 20.09.2020 ರಿಂದ 26.09.2020
ಇನ್ನು, ಚಾಮೇಗೌಡ ಏರಿಯಾ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾದರೆ ಅವರಿಗೆಲ್ಲಾ ಕಾಳಜಿ ಕೇಂದ್ರ ಆರಂಭಿಸಲು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿಯೇ ಏಳು ತಂಡಗಳನ್ನು ರಚನೆ ಮಾಡಲಾಗಿದ್ದು, ಈ ತಂಡ ನಿರಂತರ ಗಮನ ಹರಿಸಲಿದೆ ಎಂದರು.
Get In Touch With Us info@kalpa.news Whatsapp: 9481252093
Discussion about this post