ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡರ ನಿಧನದ ನಂತರ ಭದ್ರಾವತಿ ಕ್ಷೇತ್ರಕ್ಕೆ ಉತ್ತರಾಧಿಕಾರಿ ಯಾರು ಎಂದು ಘೋಷಣೆ ಮಾಡಲು ಇದು ಸೂಕ್ತ ಸಮಯವನ್ನು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಭದ್ರಾವತಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಮ್ಮ ಪಕ್ಷದ ಬಲಿಷ್ಠ ನಾಯಕನನ್ನು ಕಳೆದುಕೊಂಡಿರುವುದು ನಮಗೆ ತುಂಬಲಾರದ ನಷ್ಟ ಉಂಟಾಗಿದೆ. ಕ್ಷೇತ್ರದ ಕಾರ್ಯಕರ್ತರಲ್ಲಿ ಅನಾಥ ಭಾವನೆ ಉಂಟಾಗಿದೆ. ಆದರೂ, ಇಂದು ದುಃಖದ ಸಮಯದಲ್ಲಿ ಮುಂದಿನ ಉತ್ತರಾಧಿಕಾರಿ ಯಾರು ಎಂದು ಘೋಷಣೆ ಮಾಡುವುದು ಸೂಕ್ತವಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
Get In Touch With Us info@kalpa.news Whatsapp: 9481252093

















