ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರದ ಅಮೋಫ ಪ್ರತಿಭೆ, ಮೈಕ್ರೋ ಕಲಾವಿದ ರವಿಚಂದ್ರ ಅವರ ಕಲಾಹಸ್ತದಲ್ಲಿ ಮೂಡಿ ಬಂದ ಕಲಾಕೃತಿಗಳನ್ನು ಬಿಜೆಪಿ ಮುಖಂಡ ಎಸ್. ದತ್ತಾತ್ರಿ ಬಿಡುಗಡೆಗೊಳಿಸಿದರು.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಕಲಾಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ದತ್ತಾತ್ರಿ, ಇಷ್ಟು ಸೂಕ್ಷ್ಮವಾದಂತಹ ಕುಸುರಿ ಕೆಲಸ ಮಾಡುವುದು ಅತ್ಯಂತ ಕಷ್ಟಕರವಾದ ಕೆಲಸ. ಪ್ರಮುಖವಾಗಿ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿಯನ್ನು ಕೇವಲ 20 ಮಿಲಿ ಗ್ರಾಂ ಬಂಗಾರದಲ್ಲಿ ಕೆತ್ತನೆ ಮಾಡಿರುವುದು ಇವರ ಪ್ರತಿಭೆಗೆ ಸಾಕ್ಷಿ. ಇಂತಹ ಕಲಾವಿದರ ಬಗ್ಗೆ ನಮಗೆ ಹೆಮ್ಮೆಯಿದ್ದು, ಇವರ ಸಾಧನೆ ಗಿನ್ನಿಸ್ ದಾಖಲೆವರೆಗೂ ತಲುಪಲಿ ಎಂದು ಹಾರೈಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಇಂತಹ ಓರ್ವ ಕಲಾವಿದ ನಮ್ಮ ಜಿಲ್ಲೆಯಲ್ಲಿರುವುದು ಹೆಮ್ಮೆಯ ಸಂಗತಿ. ಇವತ ಈ ಕಲಾಕೃತಿಗಳು ಅತ್ಯಂತ ಸುಂದರವಾಗಿ ಮೂಡಿಬಂದಿದ್ದು, ಇವರನ್ನು ಜಗತ್ತಿಗೆ ಪರಿಚಯ ಮಾಡಿಕೊಡುವ ಕಾರ್ಯವನ್ನು ಪಕ್ಷದ ವತಿಯಿಂದ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪದ್ಮಿನಿ ರಾವ್ ಸೇರಿದಂತೆ ಇನ್ನಿತರರು ಇದ್ದರು.
ರವಿಚಂದ್ರ ಅವರು ಪ್ರಧಾನಿ ನರೇಂದ್ರ ಮೋದಿ, ಇಂಡಿಯಾ ಗೇಟ್, ವಿಶ್ವೇಶ್ವರಯ್ಯ, ಕ್ರಿಕೆಟ್ ವಸ್ತುಗಳು ಸೇರಿದಂತೆ ಹಲವಾರು ಸೂಕ್ಷ್ಮ ಕಲಾಕೃತಿಗಳನ್ನು ಇವರು ರಚಿಸಿದ್ದಾರೆ.
Get In Touch With Us info@kalpa.news Whatsapp: 9481252093

















