ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಎಸಿಬಿ ಸಂಸ್ಥೆಯನ್ನೇ ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಮಹತ್ವದ ಆದೇಶ ಹೊರಡಿಸಿದ ನ್ಯಾ. ವೀರಪ್ಪ ನೇತೃತ್ವದ ವಿಭಾಗೀಯ ಪೀಠ, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಆಗಿದ್ದ ಎಸಿಬಿ ರಚನೆಯನ್ನೇ ರದ್ದುಪಡಿಸಿ, ಎಸಿಬಿ ಠಾಣೆಯನ್ನೂ ಸಹ ಮುಚ್ಚುವಂತೆ ಸೂಚಿಸಿದೆ.
ಅಲ್ಲದೇ, ಎಸಿಬಿಯಲ್ಲಿರುವ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಆದೇಶಿಸಿದೆ. ರಾಜ್ಯ ಲೋಕಾಯುಕ್ತವನ್ನು ಬಲಪಡಿಸುವಂತೆ ನ್ಯಾಯಪೀಠ ಸೂಚಿಸಿದ್ದು, ಇದಕ್ಕಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದಿದೆ.
ಅಧಿಕಾರಿಗಳು ಮೂರು ವರ್ಷಕ್ಕೆ ನೇಮಕವಾಗಬಾರದು ಎಂದು ನ್ಯಾಯಪೀಠ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















