ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಡಿ.28ರಿಂದ 10 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸಚಿವ ಸುಧಾಕರ್, ಡಿ.28ರಿಂದ 10 ದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹೋಟೆಲ್’ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ, ಸಭೆ ಸಮಾರಂಭ, ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇ. 50 ರಷ್ಟು ಮಾತ್ರ ಅವಕಾಶ ನೀಡಬೇಕು. ರಾತ್ರಿ 10 ಗಂಟೆ ನಂತರ ಸಿನಿಮಾ ಥಿಯೇಟರ್ ಬಂದ್ ಆಗಲಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post