ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವಿಚಾರವನ್ನು ಸ್ವತಃ ಅವರೇ ಟ್ವೀಟ್ ಮೂಲಕ ದೃಢಪಡಿಸಿದ್ದು, ನಾನು ಕೋವಿಡ್19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ ಎಂದಿದ್ದಾರೆ.
ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.
— Nalinkumar Kateel (@nalinkateel) August 30, 2020
ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಇನ್ನು, ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಆತ್ಮೀಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಪೂರ್ಣವಾಗಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಸಂಘಟನೆಯ ಕಾರ್ಯಗಳಲ್ಲಿ ನಿರತರಾಗಲಿ, ಪಕ್ಷವನ್ನು ಮುನ್ನಡೆಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಆತ್ಮೀಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಪೂರ್ಣವಾಗಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಸಂಘಟನೆಯ ಕಾರ್ಯಗಳಲ್ಲಿ ನಿರತರಾಗಲಿ, ಪಕ್ಷವನ್ನು ಮುನ್ನಡೆಸಲಿ ಎಂದು ಹಾರೈಸುತ್ತೇನೆ.https://t.co/E5Mepd9H05
— B.S. Yediyurappa (@BSYBJP) August 30, 2020
Get In Touch With Us info@kalpa.news Whatsapp: 9481252093
Discussion about this post