ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಬಿಜೆಪಿ #BJP ನೂತನ 11ನೆಯ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ #BYVijayendra ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ವಿಜಯೇಂದ್ರ ಅವರಿಗೆ ನಿರ್ಗಮಿತ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದ್ದಾರೆ.
ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರ ಮಾಡುವ ವೇಳೆ ಉಪಸ್ಥಿತರಿದ್ದ ಋತ್ವಿಜರು ಮಂತ್ರ ಘೋಷ ಮಾಡಿ, ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಿದರು.

ತಮ್ಮ ತಂದೆ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, #BSYediyurappa ಹಿರಿಯ ನಾಯಕರಾದ ಡಿ.ವಿ. ಸದಾನಂದ ಗೌಡ, ತೇಜಸ್ವಿನಿ ಗೌಡ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಜಯೇಂದ್ರ ಸಹೋದರ-ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಸಂಸದ ತೇಜಸ್ವಿ ಸೂರ್ಯ, ಪ್ರಮುಖರಾದ ಭಗವಂತ ಕೂಬಾ, ಮಾಜಿ ಸಚಿವ ಶ್ರೀರಾಮುಲು, ಕೋಟಾ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪದಗ್ರಹಣ ಸಮಾರಂಭಕ್ಕೂ ಮುನ್ನ ಬಿಜೆಪಿ ಕಚೇರಿಯಲ್ಲಿ ವಿವಿಧ ಹೋಮ ಹವನ, ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಹೋಮದ ಪೂರ್ಣಹುತಿಯಲ್ಲಿ ವಿಜಯೇಂದ್ರ ಅಗ್ನಿದೇವರಿಗೆ ವಸ್ತç ಸಮರ್ಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post