ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಯ ನಂತರ ಎಪಿಎಂಸಿಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಉಪಯೋಗವಾಗಲಿದೆ. ನನ್ನ ಬೆಳೆ ನನ್ನ ಹಕ್ಕು ಎನ್ನುವುದು ತಿದ್ದುಪಡಿ ಕಾಯ್ದೆಯ ಮೂಲಮಂತ್ರವಾಗಿದೆ ಎಂದರು.
ವಾರ ಭವಿಷ್ಯ: ನಿಖರ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ: 27..2020 ರಿಂದ 03.10.2020
ನೂತನ ಕಾಯ್ದೆಯಿಂದ ರೈತತು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಮಾರಾಟ ಮಾಡಬಹುದು. ಇದರಿಂದ ರೈತರಿಗೆ ಉಪಯೋಗವಾಗಲಿದೆ. ಎಪಿಎಂಸಿ ವಿಚಾರದಲ್ಲಿ ಯಾವುದೇ ಸಂಶಯವಿದ್ದರೂ ರೈತರಿಗೆ ಸಹಾಯ ಮಾಡಲು ಸರ್ಕಾರ ಸಿದ್ದವಿದೆ ಎಂದರು.
ರೈತರು ಹಾಗೂ ರೈತ ಸಂಘಟನೆಗೆಳು ಈ ವಿಚಾರವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸ್ವತಃ ತಾವೇ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು, ರೈತರಿಗೆ ತಿಳಿಸಿ ಹೇಳುವ ಹಾಗೂ ಸಂಶಯಗಳನ್ನು ನಿವಾರಣೆ ಮಾಡುವ ಕಾರ್ಯವನ್ನು ಮಾಡುತ್ತೇನೆ ಎಂದರು.
ನೀರಾವರಿ ಭೂಮಿಯನ್ನು ಖರೀದಿಸಿದವರು ಅದರಲ್ಲಿ ನೀರಾವರಿ ಕೃಷಿಯನ್ನೇ ಮಾಡಬೇಕು. ಇತರ ಚಟುವಟಿಕೆಗಳಿಗೆ ಉಪಯೋಗಿಸಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡದ ಭೂಮಿಯನ್ನು ಖರೀದಿಸಲು ಅವಕಾಶವಿಲ್ಲ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನಾನುಕೂಲವಾಗದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post