ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DKShivakumar ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿನ ಸಿಬಿಐ #CBI ತನಿಖೆ ನಡೆಸುತ್ತಿರುವ ಪ್ರಕರಣವನ್ನು ಹಿಂಪಡೆಯಲು ರಾಜ್ಯ ಕಾಂಗ್ರೆಸ್ #Congress ಸರ್ಕಾರ ನಿರ್ಧರಿಸಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಆದರೆ, ಡಿಕೆಶಿ ವಿರುದ್ಧ ಈ ಶಿಫಾರಸ್ಸನ್ನು ಹಿಂಪಡೆಯುವಂತೆ ಗೃಹ ಇಲಾಖೆಯ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ.

ಪ್ರಮುಖ ವಿಚಾರವೆಂದರೆ ಸಚಿವ ಸಂಪುಟ ಸಭೆಯಿಂದ ಮುಖ್ಯ ಕಾರ್ಯದರ್ಶಿಗಳನ್ನು ಹೊರಕ್ಕೆ ಕಳುಹಿಸಿ, ಸಚಿವರುಗಳೇ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
ಹಿಂದಿನ ಬಿಜೆಪಿ ಸರ್ಕಾರಕ್ಕೆ ಅಂದಿನ ಅಡ್ವೊಕೇಟ್ ಜನರಲ್ ಅವರು ಡಿಕೆಶಿ ಪ್ರಕರಣವನ್ನು ಸಿಬಿಐಗೆ ವಹಿಸುವಷ್ಟು ಗಂಭೀರ ಆರೋಪವಲ್ಲ. ರಾಜ್ಯ ಪೊಲೀಸರಿಂದಲೇ ತನಿಖೆ ನಡೆಸಬಹುದು ಎಂದು ಶಿಫಾರಸ್ಸು ಮಾಡಿದ್ದರು. ಆದರೆ, ಇದನ್ನು ತಿರಸ್ಕರಿಸಿದ ಅಂದಿನ ಸರ್ಕಾರ ಕಾನೂನು ಮೀರಿ ಸಿಬಿಐಗೆ ಶಿಫಾರಸ್ಸು ಮಾಡಿತ್ತು ಎಂದು ಪ್ರಕರಣ ಕುರಿತಂತೆ ಹಾಲಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post