ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಮಂಡಿಸಿರುವ ರಾಜ್ಯ ಬಜೆಟ್’ನಲ್ಲಿ ತೈಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಏರಿಕೆ ಮಾಡಿದ್ದು, ಇದರ ಪರಿಣಾಮವಾಗಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗಲಿದೆ.
ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.32 ರಿಂದ 35ಕ್ಕೆ ಏರಿಕೆ ಮಾಡಿದ್ದು, ಡೀಸೆಲ್ ಮೇಲಿನ ತೆರಿಗೆಯನ್ನು ಶೇ.21 ರಿಂದ 24ಕ್ಕೆ ಹೆಚ್ಚಿಸಲಾಗಿದೆ. ಪರಿಣಾಮವಾಗಿ ಎರಡೂ ಉತ್ಪನ್ನಗಳ ದರ ಏರಿಕೆಯಾಗುವುದು ನಿಶ್ಚಿತವಾಗಿದೆ.
ಇನ್ನು, ಇದೇ ವೇಳೆ ಬಜೆಟ್’ನಲ್ಲಿ ಮದ್ಯದ ದರವನ್ನೂ ಸಹ ಏರಿಕೆ ಮಾಡಿರುವ ಮುಖ್ಯಮಂತ್ರಿಗಳು ಸಂಪನ್ಮೂಲ ಕ್ರೋಢೀಕರಣದತ್ತ ಹೆಚ್ಚಿನ ಒತ್ತು ನೀಡಿರುವುದರ ಪರಿಣಾಮ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
Get in Touch With Us info@kalpa.news Whatsapp: 9481252093















