ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯಾದ್ಯಂತ ಕೆಲಸ ನಿರ್ವಹಿಸುವ ಹೆಣ್ಣು ಮಕ್ಕಳಿಗೆ ಋತುಚಕ್ರದ #MenstrualCycle ಸಮಯದಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಹೆಣ್ಣು ಮಕ್ಕಳಿಗೆ ಮಹತ್ವದ ಉಡುಗೊರೆ ನೀಡಿದೆ.
ಈ ಕುರಿತಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯ ನಂತರ ಮಾತನಾಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಈ ವಿಷಯವನ್ನು ತಿಳಿಸಿದ್ದಾರೆ.
ಈ ಕುರಿತಂತೆ ರಾಜ್ಯ ಸರ್ಕಾರಕ್ಕೆ ಕಾರ್ಮಿಕ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಪರಿಗಣಿಸಿರುವ ಸರ್ಕಾರ ಋತು ಚಕ್ರ ರಜೆ ನೀತಿ 2025 (Menstrual Leave Policy, 2025)ಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಯಾರಿಗೆಲ್ಲಾ ಪ್ರಯೋಜನ?
ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್’ಸಿ, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ.
ವರ್ಷಕ್ಕೆ 12 ದಿನ ರಜೆ ನೀಡುವುದಾಗಿದ್ದು, ಯಾವ ದಿನ ರಜೆ ಪಡೆಯಬೇಕು ಎನ್ನುವುದನ್ನು ಆ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳುತ್ತಾರೆ ಎಂದು ವರದಿಯಾಗಿದೆ.
ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಪಡೆಯಲಾಗಿದ್ದು, ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.
ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ ಒಂದು ದಿನ ರಜೆ ತೆಗೆದುಕೊಳ್ಳಬಹುದೆ ಎಂದರು.
ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳನ್ನು ನಡೆಸಲಾಗಿದ್ದು, ಯಾವತ್ತು ರಜೆ ಬೇಕು ಎನ್ನುವುದನ್ನು ಹೆಣ್ಣುಮಕ್ಕಳೇ ತೀರ್ಮಾನ ಮಾಡಿಕೊಳ್ಳಬೇಕು ಎಂದರು.
ಅತಿ ಶೀಘ್ರದಲ್ಲಿ ಬಿಲ್ ತಂದು ದೊಡ್ಡ ಕಾರ್ಯಕ್ರಮ ಮಾಡಿ ಅನುಷ್ಠಾನ ಮಾಡುತ್ತೇವೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post