ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ದಾರ್ಶನಿಕರ ಜಯಂತಿಗಳನ್ನು ಆಚರಿಸುವ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಸಮಾಜೋಪಯೋಗಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮತ್ಸಮುದ್ರ ಗ್ರಾಮದ ಸ್ವಾಮಿ ವಿವೇಕಾನಂದ ಸಮಾಜ ಸೇವಾ ಸಂಸ್ಥೆ ಅಧ್ಯಕ್ಷ ಎ. ಚಲ್ಮೇಶ ತಿಳಿಸಿದರು.
ಸಮೀಪದ ಮತ್ಸಮುದ್ರ ಗ್ರಾಮದ ಸಹಿಪ್ರಾ ಶಾಲಾ ಆವರಣದಲ್ಲಿ ಗ್ರಾಮದ ಸ್ವಾಮಿವಿವೇಕಾನಂದ ಸಮಾಜ ಸೇವಾ ಸಂಸ್ಥೆ ಹಾಗೂ ಚಳ್ಳಕೆರೆ ತಾಲೂಕು ಬಿಜೆಪಿ ಯುವಮೋರ್ಚಾ ವತಿಯಿಂದ ಈಚೆಗೆ ಆಯೋಜಿಸಿದ್ದ ಸ್ವಚ್ಚತಾ ಅಭಿಯಾನ, ಹಾಗೂ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮದ ಸ್ವಚ್ಚತಾ ಕಾರ್ಯ, ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ, ಸರ್ಕಾರಿ ಶಾಲೆಗಳ ಮಕ್ಕಳಿಗೆ ಲೇಖನಿ ಸಾಮಗ್ರಿಗಳ ಉಚಿತ ವಿತರಣೆಯಂತಹ ಸಮಾಜೋಪಯೋಗಿ ಕಾರ್ಯಗಳನ್ನು ಜಯಂತ್ಯುತ್ಸವಗಳ ವೇಳೆ ಹಮ್ಮಿಕೊಳ್ಳಬೇಕು ಎಂದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಗ್ರಾಮ ಸ್ವಚ್ಚತಾ ಕಾರ್ಯ, ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಸಮಾಜ ಸೇವಾ ಸಂಸ್ಥೆ ಅಧ್ಯಕ್ಷ ಎ ಚಲ್ಮೇಶ, ಪದಾಧಿಕಾರಿಗಳಾದ ರಾಘವೇಂದ್ರ, ಶಿವಸ್ವಾಮಿ, ಪರಮೇಶ್ವರ, ಸಿ. ಮಂಜುನಾಥ, ನಾಗೇಂದ್ರಪ್ಪ, ಡಿ. ಕರಿಯಣ್ಣ, ತಿಪ್ಪೇಸ್ವಾಮಿ, ಕಂಠಪ್ಪ, ಉಪನ್ಯಾಸಕರಾದ ನಾಗೇಂದ್ರಪ್ಪ, ಗ್ರಾಮಸ್ಥರು ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093







Discussion about this post