ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್19 ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಕೆ.ಸಿ. ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಪರಿಶೀಲನೆ ನಡೆಸಿ ಮಾತನಾಡಿದ ಸಚಿವ ಶ್ರೀರಾಮುಲು ಈ ಕುರಿತಂತೆ ಸುಳಿವು ನೀಡಿದ್ದು, ಬೆಂಗಳೂರಿನಲ್ಲಿ ಕೋವಿಡ್19 ಪ್ರಕರಣಗಳು ಹೆಚ್ಚಾಗಿದ್ದು, ಈ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯರು ಮುಖ್ಯಮಂತ್ರಿಗಳ ಜೊತೆಯಲ್ಲಿ ಚರ್ಚೆ ನಡೆಸಿದ್ದಾರೆ. ಮಾತ್ರವಲ್ಲ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಕುರಿತಾಗಿಯೂ ಚರ್ಚೆ ನಡೆದಿದೆ ಎಂದಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post