ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಒಂದು ದಿನ ಬಾಕಿ ಇರುವಂತೆಯೇ ರಾಜ್ಯದಾದ್ಯಂತ ವಿದ್ಯುತ್ ದರವನ್ನು ಏರಿಕೆ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಕರ್ನಾಟಕ ವಿದ್ಯುಶ್ಚಕ್ತಿ ನಿಯಂತ್ರಣ ಆಯೋಗ, ರಾಜ್ಯದಲ್ಲಿ ಪ್ರತಿ ಯೂನಿಟ್ ವಿದ್ಯುತ್’ಗೆ 70 ಪೈಸೆ ಏರಿಕೆ ಮಾಡಲಾಗಿದ್ದು, ಇದು ಎಪ್ರಿಲ್ ಒಂದರಿಂದಲೇ ಪೂರ್ವಾನ್ವಯವಾಗುತ್ತದೆ ಎಂದು ತಿಳಿಸಲಾಗಿದೆ.
ದರ ಏರಿಕೆಯಿಂದಾಗಿ ಗ್ರಾಹಕರ ಬಿಲ್ಲುಗಳಲ್ಲಿ ಒಟ್ಟು ಶೇಕಡಾ 8.31ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಲಾಗಿದೆ.
Discussion about this post