ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದು ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಸಚಿವ ಉಮೇಶ್ ಕತ್ತಿ ಚಿಕಿತ್ಸೆ ಫಲಕಾರಿಯಾಗಿದೇ ಕೊನೆಯುಸಿರೆಳೆದಿದ್ದಾರೆ.
ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಕತ್ತಿ ಅವರಿಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯಜಿಸಿದ್ದಾರೆ.
ಇಂದು ರಾತ್ರಿ ಊಟದ ನಂತರ 10 ಗಂಟೆ ವೇಳೆಗೆ ಸ್ನಾನಗೃಹಕ್ಕೆ ತೆರಳಿದ್ದ ಕತ್ತಿ ಅವರು ಅಲ್ಲಿಯೇ ಕುಸಿದು ಬಿದ್ದಿದ್ದರು. ಬಹಳ ಹೊತ್ತು ಹೊರಬಾರದ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಬಾಗಿಲು ದಬ್ಬಿ ನೋಡಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು. ತತಕ್ಷಣವೇ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ನೀಡಲಾಯಿತು. ವೈದ್ಯರು ಬಹಳಷ್ಟು ಶ್ರಮವಹಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಆರೋಗ್ಯ ಸಚಿವ ಡಾ.ಸುಧಾಕರ್ ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿದ್ದು, ಸಿಟಿ ರೌಂಡ್ಸ್’ನಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಆಸ್ಪತ್ರೆಗೆ ತೆರಳುತ್ತಿದ್ದಾರೆ.
ಹಾವೇರಿ ಜಿಲ್ಲೆಯ ಹುಕ್ಕೇರಿಯ ಶಾಸಕರಾಗಿದ್ದ ಕತ್ತಿ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post