ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಶಾಸಕ, ಚಿತ್ರ ನಿರ್ಮಾಪಕ ಮುನಿರತ್ನ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಜನಾರ್ದನ ರೆಡ್ಡಿ ಅವರು ಆಗಸ್ಟ್ 30ರಂದು ಬಳ್ಳಾರಿಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಇಂದು ಸಂಜೆ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಇಂದು ಸಂಜೆ ನನಗೆ ಕೊರೋನಾ ಸೊಂಕು ದೃಡಪಟ್ಟಿರುವ ಹಿನ್ನಲೆಯಲ್ಲಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವೆ. ಆ ಕಾರಣದಿಂದ…
Posted by Gali Janardhan Reddy on Saturday, 29 August 2020
ಈ ಕುರಿತಂತೆ ತಮ್ಮ ಫೇಸ್ ಬುಕ್’ನಲ್ಲಿ ಅವರು ಬರೆದುಕೊಂಡಿದ್ದು, ಇಂದು ಸಂಜೆ ನನಗೆ ಕೊರೋನಾ ಸೊಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವೆ. ಆ ಕಾರಣದಿಂದ ನಾನು ನಾಳೆ ಆಗಸ್ಟ್ 30 ರಂದು ಬಳ್ಳಾರಿಗೆ ಭೇಟಿ ನೀಡಿ ನನ್ನ ಪ್ರಾಣ ಸ್ನೇಹಿತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿಯವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಉತ್ತಮ ವೈದ್ಯರ ತಂಡ ನನಗೆ ಚಿಕಿತ್ಸೆ ನೀಡುತ್ತಿದೆ. ನನಗೆ ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ಕೊರೋನಾ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ ಮನೆಗೆ ಮರಳಲಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು, ಶಾಸಕ ಮುನಿರತ್ನ ಅವರು ತಮಗೆ ಕೊರೋನಾ ಪಾಸಿಟಿವ್ ಬಂದಿರುವುದನ್ನು ಸ್ಪಷ್ಟಪಡಿಸಿದ್ದಾರೆ. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷ ವಯಸ್ಸಿನವನಾದ ನಾನು ಇಂದು ಕೊವೀಡ್ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ. ಇಲ್ಲದಿದ್ದರೆ ಕ್ಷಮಿಸಿಬಿಡಿ ಎಂದಿದ್ದಾರೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಮತದಾರ ದೇವರುಗಳಿಗೆ ವಂದನೆಗಳು.
57 ವರ್ಷ ವಯಸ್ಸಿನವನಾದ ನಾನು ಇಂದು ಕೊವೀಡ್ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ. ಇಲ್ಲದಿದ್ದರೆ ಕ್ಷಮಿಸಿಬಿಡಿ.
ಇಂತಿ ನಿಮ್ಮ ಸೇವಕ
ಮುನಿರತ್ನ 🙏— Munirathna MLA (@MunirathnaMLA) August 29, 2020
Get In Touch With Us info@kalpa.news Whatsapp: 9481252093
Discussion about this post