ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಗಣೇಶ ಚತುರ್ಥಿಗೆ ಇನ್ನು ಐದು ದಿನ ಬಾಕಿ ಇರುವಂತೆಯೇ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದನ್ನು ಟ್ವೀಟ್ ಮಾಡಿದ್ದು, ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿಸಿದ್ದಾರೆ.
ಮಾರ್ಗಸೂಚಿಯಲ್ಲೇನಿದೆ?
- ದೇವಸ್ಥಾನ, ಮನೆಗಳಲ್ಲಿ, ಸರಕಾರಿ ಜಾಗ, ಖಾಸಗಿ ಜಾಗ, ಸಾರ್ವಜನಿಕ ಬಯಲು ಪ್ರದಶಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಹುದು
- ಮೂರ್ತಿಯ ಎತ್ತರ ಗರಿಷ್ಠ ಮನೆಯೊಳಗೆ 2 ಅಡಿ, ಬಯಲು ಪ್ರದೇಶದಲ್ಲಿ 4 ಅಡಿ ಇರಬೇಕು.
- ಒಮ್ಮೆ 20 ಜನರಿಗಿಂತ ಹೆಚ್ಚು ಸೇರುವುದಕ್ಕೆ ಅವಕಾಶವಿಲ್ಲ
- ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಬಾರದು
- ಸ್ಥಳೀಯ ಸಂಸ್ಥೆಯಿಂದ ಪೂರ್ವಾನುಮತಿ ಪಡೆಯಬೇಕು
- ಒಂದು ವಾರ್ಡಿಗೆ, ಒಂದು ಗ್ರಾಮಕ್ಕೆ ಒಂದೇ ಗಣೇಶ ಪ್ರತಿಷ್ಠಾಪನೆಗೆ ಪ್ರೋತ್ಸಾಹಿಸಬೇಕು
- ಮೂರ್ತಿ ತರುವಾಗ, ವಿಸರ್ಜಿಸುವಾಗ ಮೆರವಣಿಗೆ ಕಡ್ಡಾಯವಾಗಿ ನಿಷೇಧ
- ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸೇಶನ್, ಸಾಮಾಜಿಕ ಅಂತರಗಳನ್ನು ಕಡ್ಡಾಯವಾಗಿ ಪಾಲಿಸಬೇಕು
Get In Touch With Us info@kalpa.news Whatsapp: 9481252093
Discussion about this post