ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಕಳೆದ ವಾರ ಕೈಗೊಂಡು ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಕುರಿತಂತೆ ಡಿ.ಜಿ. ರಾಘವೇಂದ್ರ ಎನ್ನುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.
ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನಕ್ಕೆ ತಡೆ ನೀಡಿದೆ.
ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ 2ಡಿ ಮತ್ತು ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post