ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅ.5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಸಚಿವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಹೋಂ ಕ್ವಾರಂಟೈನ್’ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯರ ಸಲಹೆಯ ಮೇರೆಗೆ ಇದೀಗ ಆಸ್ಪತ್ರೆಗೆ ಕೊರೋನಾ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post