ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ವತಿಯಿಂದ ರಾಜ್ಯದಾದ್ಯಂತ ನ.18ರಿಂದ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಮಾತನಾಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಅಧ್ಯಕ್ಷರು ಹಾಗಾಗಿ ಸಿ.ಎಂ. ಇಬ್ರಾಹಿಂ ಅವರನ್ನು ಭೇಟಿ ನೀಡಿದೆ. ಹಲವಾರು ವಿಚಾರಗಳ ಚರ್ಚೆ ಮಾಡಿದ್ದೇನೆ. ಪಕ್ಷದ ಸಂಘಟನೆ, ನ. 18ರಿಂದ ಪಂಚರತ್ನ ರಥಯಾತ್ರೆ ಪ್ರಾರಂಭ ಮಾಡಬೇಕು ಎಂದಿದ್ದೇವೆ. ಯಾವ ರೀತಿ ಮಾಡಬೇಕು ಅಂತ ಚರ್ಚೆ ಮಾಡಲು ಬಂದಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯ ವಿಚಾರವಾಗಿಯೂ ಮಾತನಾಡಿದ್ದಾನೆ ಎಂದು ತಿಳಿಸಿದರು.
ನಾವು ಸಹ ಪ್ರತಿ ಅಭ್ಯರ್ಥಿಗಳಿಗೆ ಮುಂದಿನ ಆರು ತಿಂಗಳಿಗೆ ಯಾವ ರೀತಿ ಚುನಾವಣಾ ತಂತ್ರ ಅಳವಡಿಸಬೇಕು. ಪ್ರತಿ ಬೂತ್ ಮಟ್ಟದಲ್ಲಿ ಯಾವ ರೀತಿ ಜವಾಬ್ದಾರಿ ನಿರ್ವಹಣೆ, ಪ್ರತಿ ಮನೆ ಮನೆಗೆ ಪಂಚರತ್ನ ಯೋಜನೆ ಮುಟ್ಟಿಸುವ ವಿಚಾರ. ಪ್ರತಿ ಅಭ್ಯರ್ಥಿ ಸೋಷಿಯಲ್ ಮೀಡಿಯಾದಲ್ಲಿ ಯಾವ ರೀತಿ ಮಾಡಬೇಕು. ನಿತ್ಯದ ಅವರ ಚಟುವಟಿಕೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಯಾವ ರೀತಿ ಮಾಡಬೇಕು. ನಮ್ಮ ಪಕ್ಷ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದೇವೆ. ಅಧ್ಯಕ್ಷರು ನಿಲ್ಲಿಸಬೇಕು ಅಂತ ಎಂಟತ್ತು ಕ್ಷೇತ್ರದಲ್ಲಿ ಒತ್ತಡ ಇದೆ. ನಾನು ಅವರು ಇಬ್ಬರೇ ಓಡಾಡಬೇಕಾಗಿದೆ. ಇಬ್ರಾಹಿಂ ಹಾಗೂ ನಾನು ರಾಜ್ಯ ಸುತ್ತಬೇಕು. ಪಕ್ಷ ಸಂಪೂರ್ಣ ಬಹುಮತ ತರಲು ಮಾಡಲಾಗುತ್ತದೆ ಎಂದು ಹೇಳಿದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post