ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ #DKShivakumar ಅವರು ಬಿಜೆಪಿ ಸೇರುವ ಕುರಿತಾಗಿ ಈವರೆಗೂ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ #BasavarajaBommai ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಿವಕುಮಾರ್ ಅವರು ಬಿಜೆಪಿ #BJP ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷಿಪ್ರವೇ ಆಗುವುದು, ಓರ್ವ ನೈಟ್ ಆಗೋದು. ಪ್ರಶ್ನೆ ಅದಲ್ಲ. ಆದರೆ, ನಮ್ಮ ತಿಳಿವಳಿಕೆಯಲ್ಲಿ ಆ ರೀತಿ ಯಾವುದೇ ಸ್ಥಿತಿ ಇಲ್ಲ ಎಂದರು.
Also Read>> ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇರಬಾರದು | ಕೆ.ಎಸ್. ಈಶ್ವರಪ್ಪ ಕಿಡಿ
ಇಶಾ ಫೌಂಡೇಶನ್ #ISHAFoundation ಶಿವರಾತ್ರಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಹಾಗೂ ಡಿ.ಕೆ. ಶಿವಕುಮಾರ್ ಅವರುಗಳು ಒಟ್ಟಾಗಿ ಭಾಗವಹಿಸಿದ್ದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲ. ಸದ್ಗುರು ಅವರ ಕಾರ್ಯಕ್ರಮದಲ್ಲಿ ಮೋದಿ ಅವರು ಹಿಂದೆ ಭಾಗವಹಿಸಿದ್ದರು. ಅಮಿತ್ ಶಾ ಅವರು ಭಾಗಿಯಾಗಿದ್ದರು. ನಾವೂ ಸಹ ಸಾಕಷ್ಟು ಸಲ ಭಾಗಿವಹಿಸಿದ್ದೆವು. ಆದರೆ, ಕಾಂಗ್ರೆಸ್’ನಲ್ಲಿ ಬೇರೆ ಬೇರೆ ವ್ಯಾಖ್ಯಾನ ನಡೆಯುತ್ತಿರುವುದು ಅವರ ಪಕ್ಷದ ವಿಚಾರ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post