ಕಲ್ಪ ಮೀಡಿಯಾ ಹೌಸ್ | ಉಡುಪಿ/ಕಾರ್ಕಳ |
ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾರ್ಕಳದ #Karkala ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು #ChristKingPUCollege ಶೇ.100ರಷ್ಟು ಫಲಿತಾಂಶ ಪಡೆದುಕೊಳ್ಳುವ ಮೂಲಕ ಅದ್ವಿತೀಯ ಸಾಧನೆ ಮಾಡಿದೆ.
ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಒಟ್ಟು 188 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ಈ ಮೂಲಕ ಸಂಸ್ಥೆ ಶೇ.100ರಷ್ಟು ಫಲಿತಾಂಶ ದಾಖಲಿಸಿ, ತನ್ನ ಹಿಂದಿನ ದಾಖಲೆಗಳನ್ನೇ ಮುಂದುವರೆಸಿದೆ.

ವಾಣಿಜ್ಯ ವಿಭಾಗದಲ್ಲಿ ಪ್ರೀಶಲ್ ಡಿ’ಅಲ್ಮೇಡಾ 591 ಅಂಕಗಳನ್ನು ಪಡೆದುಕೊಂಡು ರಾಜ್ಯಮಟ್ಟದಲ್ಲಿ 7ನೆಯ ರ‍್ಯಾಂಕ್ ಹಾಗೂ ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವೈಷ್ಣವಿ ಪೈ, ವೆರಿನಾ ಪೆರಿಸ್ ಹಾಗೂ ವಿವಿನ್ ಡಿ’ಸೋಜ 583 ಅಂಕಗಳನ್ನು ಪಡೆದು ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದ 14 ಹಾಗೂ ವಾಣಿಜ್ಯ ವಿಭಾಗದಲ್ಲಿ 14 ಹೀಗೆ ಒಟ್ಟು 28 ವಿದ್ಯಾರ್ಥಿಗಳು ಶೇ. 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 41 ಹಾಗೂ ವಿಜ್ಞಾನ ವಿಭಾಗದಲ್ಲಿ 47 ವಿದ್ಯಾರ್ಥಿಗಳು ಹೀಗೆ 88 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 57 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 71 ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೆಯಾಗಿ 128 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ (ಡಿಸ್ಟಿಂಕ್ಷನ್) ಹಾಗೂ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದುಕೊಂಡಿದ್ದಾರೆ.

ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿಗೆ ದಾಖಲಾತಿ ಆರಂಭಗೊಂಡಿದೆ.
ಹಾಸ್ಟೆಲ್ ಸೌಲಭ್ಯ
ಇನ್ನು, ಕಾಲೇಜಿನಲ್ಲಿ 8ನೆಯ ತರಗತಿಯಿಂದ ದ್ವಿತೀಯ ಪಿಯುಸಿವರೆಗೂ ಬಾಲಕ ಹಾಗೂ ಬಾಲಕಿಯರಿಗೆ ಸುಸಜ್ಜಿತ ಹಾಸ್ಟೆಲ್ ಸೌಲಭ್ಯ ಲಭ್ಯವಿದೆ.
ಹೆಚ್ಚಿನ ಮಾಹಿತಿ ಹಾಗೂ ದಾಖಲಾತಿಗಾಗಿ ಸಂಪರ್ಕಿಸಿ:
+91 9611474571
+91 7022274843
Website: www.christkinginstitution.com








Discussion about this post